ಕಾರ್ಕಳ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾದ ಹೆಬ್ರಿಯ ಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಹೆಬ್ರಿ ಉದಯ್ ಕುಮಾರ್ ಶೆಟ್ಟಿ ಅವರನ್ನು ಜ. 7ರಂದು ಕಾರ್ಕಳ ಕಾಬೆಟ್ಟು ಕಟ್ಟೆ ಮಾರು ನೈವೇದ್ಯ ಸಭಾ ವೇದಿಕೆಯಲ್ಲಿ ರೋಟರಿ ಸಂಸ್ಥೆಯ ಕ್ರಿಸ್ಮಸ್ ಹಾಗೂ ಹೊಸ ವರ್ಷ ಆಚರಣೆಯ “ಸಂಭ್ರಮ ಸಮ್ಮಿಲನ” ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಖ್ಯಾತ ಶಿಲ್ಪಿ ಕೆ ಸತೀಶ್ ಆಚಾರ್ಯ ದಂಪತಿ ಅವರನ್ನು ಗೌರವಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾರ್ಕಳ ರೋಟರಿ ಕ್ಲಬ್ಬಿನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ವಹಿಸಿದ್ದರು.
ಸಮಾರಂಭದಲ್ಲಿ ಕಾರ್ಕಳ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಹ ಸಂಸ್ಥಾಪಕ ಡಾ.ಗಣನಾಥ ಶೆಟ್ಟಿ ಬಿ., ಕ್ಲಬ್ಬಿನ ಮಾಜಿ ಜಿಲ್ಲಾ ಗವರ್ನರ್ ಡಾ.ಭರತೇಶ್ ಆದಿರಾಜ್, ಜಿಲ್ಲಾ ಸ್ಪೋರ್ಟ್ಸ್ ಚೇರ್ಮನ್ ಜಾನ್ ಡಿಸಿಲ್ವ, ಜಿಲ್ಲಾ ಸಹಾಯಕ ಗವರ್ನರ್ ವಿಘ್ನೇಶ್ ಶೆಣೈ, ವೃತ್ತಿಪರ ಸೇವಾ ವಿಭಾಗದ ಚೇರ್ಮನ್ ಶೈಲೇಂದ್ರ ರಾವ್ ಮೊದಲಾದವರು ಉಪಸ್ಧರಿದ್ದರು.
ರೋಟರಿ ಕ್ಲಬ್ಬಿನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಸ್ವಾಗತಿಸಿ ನಿರೂಪಿಸಿದರು. ಕಾರ್ಯದರ್ಶಿ ಚೇತನ್ ನಾಯಕ್ ವಂದಿಸಿದರು.


















