ಉಡುಪಿ: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ಪ್ಲಾಟ್ಫಾರ್ಮ್ ಸರ್ಫೇಸಿಂಗ್, ಪ್ಲಾಟ್ಫಾರ್ಮ್ ಶೆಲ್ಟರ್ ಮತ್ತು ಫುಟ್ ಓವರ್ ಬ್ರಿಡ್ಜ್ ರೂಫ್ ಉದ್ಘಾಟನಾ ಸಮಾರಂಭವು ಜನವರಿ 14 ರಂದು ಬೆಳಗ್ಗೆ 10.30 ಕ್ಕೆ ಉಡುಪಿ ರೈಲ್ವೆ ಸ್ಟೇಷನ್ನಲ್ಲಿ ನಡೆಯಲಿದೆ.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಕೊಂಕಣ ರೈಲ್ವೆ ಕಾರ್ಪೊರೇಷನ್
ಲಿಮಿಟೆಡ್ ಮ್ಯಾನೆಜಿಂಗ್ ಡೈರೆಕ್ಟರ್ ಸಂತೋಷ್ ಕುಮಾರ್ ಝಾ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕ ಯಶ್ಪಾಲ್ ಎ
ಸುವರ್ಣ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
















