ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ಬಡಗಬೆಟ್ಟು ಗ್ರಾಮದ ನಿವಾಸಿ ನಿರ್ವಾಣ ಸ್ವಾಮಿ ಹೆಚ್.ಎಸ್ (53) ಎಂಬ ವ್ಯಕ್ತಿಯು ಕೆ.ಎಂ.ಸಿ ಮಣಿಪಾಲದ Terrier security ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಜನವರಿ 2 ರಂದು ಬ್ಯಾಸೆಲ್ ಮಿಷನ್ ಹಾಲ್‌ನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿದ್ದವರು ರಾತ್ರಿ 8.30 ರ ಬಳಿಕ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಗೋಧಿ ಮೈ ಬಣ್ಣ, ಧೃಡ ಶರೀರ ಹೊಂದಿದ್ದು, ಕನ್ನಡ, ಹಿಂದಿ ಮಾತನಾಡಬಲ್ಲವರಾಗಿರುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.