ಮಂಗಳೂರು: ಬೈಕ್ ಗೆ ಕಾರು ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಶನಿವಾರ ಸಂಭವಿಸಿದೆ.
ಮೃತ ಸವಾರನನ್ನು ಕಲ್ಲೇರಿ ನಿವಾಸಿ ಅಬ್ದುಲ್ ಅಝೀಜ್ (37) ಎಂದು ಗುರುತಿಸಲಾಗಿದೆ. ಅಝೀಝ್ ಅವರು ತನ್ನ ಬೈಕ್ ನಲ್ಲಿ ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಆಗಮಿಸುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕಾರು ನಡುವೆ ಮಠ ಮಸೀದಿಯ ಬಳಿ ಢಿಕ್ಕಿ ಸಂಭವಿಸಿದೆ.
ಢಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅಬ್ದುಲ್ ಅಝೀಝ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಹಾಗೂ ಪುತ್ತೂರು ಸಂಚಾರಿ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.