ಉಡುಪಿ: ಫೇಸ್ ಬುಕ್, ವಾಟ್ಸಾಪ್ ಸಾಮಾಜಿಕ ಜಾಲತಾಣದಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ವರದಿಯಾಗಿದೆ.
ನಕಲಿ ಖಾತೆ ತೆರೆದು ಬೇರೆ ಬೇರೆ ಕಾರಣಗಳಿಗಾಗಿ ಹಣ ನೀಡುವಂತೆ ಸಂದೇಶ ಕಳುಹಿಸಲಾಗಿದೆ. ಈ ಬಗ್ಗೆ ಈಗಾಗಲೇ ಉಡುಪಿ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅದರೂ ಕೂಡ ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ. ಯಾರೂ ಕೂಡ ಹಣ ನೀಡಬಾರದು. ಇಂತಹ ಸಂದೇಶಗಳಿಗೆ ಸ್ಪಂದಿಸದಿರುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















