ಉಡುಪಿ: ಶೀರೂರು ಪರ್ಯಾಯದ ಪ್ರಯುಕ್ತ ನಗರಸಭೆಯ ವತಿಯಿಂದ 50ಲಕ್ಷ ವೆಚ್ಚದಲ್ಲಿ ನಗರದಾದ್ಯಂತ ಮಾಡಿರುವ ವಿದ್ಯುತ್ ದೀಪಾಲಂಕಾರವನ್ನು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಗುರುವಾರ ಸಂಜೆ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಮೊದಲ ಬಾರಿಗೆ ಪರ್ಯಾಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. ಸಿಂಗಾರಗೊಂಡ ನಗರಗಳು, ಪರ್ಯಾಯದ ಸಿದ್ಧತೆಗಳು ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವುದು ಸಂತೋಷವಾಗಿದೆ ಎಂದರು.
ನಗರದ ಕೋರ್ಟ್ ರಸ್ತೆಯ ಕೆನರಾ ಬ್ಯಾಂಕ್ ನ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿದ ಪರ್ಯಾಯ ಕಾರ್ಯಕ್ರಮಕ್ಕೆ ಹೆಚ್ಚಿನ ಮೆರುಗು ನೀಡಲು ಈ ಬಾರಿ ವಿಶೇಷ ವಿದ್ಯುದ್ದೀಪಾಲಂಕಾರ ಮಾಡಲಾಗಿದೆ ಎಂದರು. ಈ ಸಂದರ್ಭದಲ್ಲಿ ವಿದ್ಯುದ್ದೀಪಾಲಂಕಾರ ವ್ಯವಸ್ಥೆ ಮಾಡಿದ ಕೃಷ್ಣ ಕುಲಾಲ್ ಅವರನ್ನು ಶಾಸಕರು ಅಭಿನಂದಿಸಿದರು. ಶೀರೂರು ಪರ್ಯಾಯಕ್ಕೆ ಉಡುಪಿ ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ.
ಕೆನರಾಬ್ಯಾಂಕ್ ನ ಜಿ ಎಂ ಗಂಗಾಧರ್, ನಗರ ಸಭೆ ಆಯುಕ್ತ ಮಹಾಂತೇಶ್ ,ನಗರ ಸಭೆ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ್ ಪೂಜಾರಿ, ರಜನಿ ಹೆಬ್ಬಾರ್ , ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರ್ , ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ್ ಹೆಗ್ಡೆ, ಮಹಿಳಾ ಘಟಕದ ಪದ್ಮಲತಾ, ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ , ಪ್ರಚಾರ ಸಮಿತಿ ಸಂಚಾಲಕ ನಂದನ್ ಜೈನ್ ,ವಿಷ್ಣು ಮೂರ್ತಿ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.
















