ಉಡುಪಿ:ಶೈಕ್ಷಣಿಕ ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿ ಎನ್.ಐ.ಎಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕ ಮರುಪಾವತಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳು ಪ್ರಸ್ತಾವನೆಯನ್ನು ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದೂ.ಸಂ: 0820-2521324/9845432303 ಅನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿ ಪ್ರಕಟಣೆ ತಿಳಿಸಿದೆ.