ನಟ ದುನಿಯಾ ವಿಜಯ್, ನಟಿ ರಚಿತಾ ರಾಮ್, ರಾಜ್ ಬಿ ಶೆಟ್ಟಿ ಅವರ ಅಭಿನಯದಲ್ಲಿ ಮೂಡಿಬರುತ್ತಿರುವ ‘ಲ್ಯಾಂಡ್‌ಲಾರ್ಡ್’ ಸಿನಿಮಾದ ಟ್ರೇಲರ್ ಇಂದು (ಜ.18) ಬಿಡುಗಡೆಯಾಗಿದೆ.
ಜಡೇಶ್ ಹಂಪಿ ನಿರ್ದೇಶನದ ಲ್ಯಾಂಡ್‌ಲಾರ್ಡ್ ಸಿನಿಮಾ ವಿಶ್ವದಾದ್ಯಂತ ಜನವರಿ 23ರಂದು ಬಿಡುಗಡೆಯಾಗುತ್ತಿದೆ.ಇದೀಗ ಲ್ಯಾಂಡ್‌ಲಾರ್ಡ್ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಸಿನಿಮಾದ ಹೆಸರೇ ಸೂಚಿಸುತ್ತಿರುವಂತೆ ಭೂಮಾಲಿಕರ ದರ್ಪ, ಜೀತದಾಳುಗಳ ನೋವಿನ ಕತೆ ಇದಾಗಿದೆ. ಇದೇ ಮೊದಲ ಬಾರಿಗೆ ದುನಿಯಾ ವಿಜಯ್ ಭಿನ್ನ ಪಾತ್ರದಲ್ಲಿ ನಟಿಸಿದ್ದಾರೆ.ಇನ್ನು, ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನದಲ್ಲಿ ಸುಂದರ ಹಾಡುಗಳು ಮೂಡಿಬಂದಿವೆ.
ಈ ಚಿತ್ರವನ್ನು ‘ಕಾಟೇರ’ ಸಿನಿಮಾದ ಕಥೆಗಾರ ಜಡೇಶ ಕೆ. ಹಂಪಿ ನಿರ್ದೇಶನ ಮಾಡಿದ್ದು, ಕೆ.ವಿ ಸತ್ಯಪ್ರಕಾಶ್ ಹಾಗೂ ಹೇಮಂತ್ ಗೌಡ ಅವರು ನಿರ್ಮಾಣ ಮಾಡುತ್ತಿದ್ದಾರೆ. ರಚಿತಾ ರಾಮ್, ರಿತನ್ಯಾ, ಶಿಶಿರ್ ಬೈಕಾಡಿ, ರಾಕೇಶ್ ಅಡಿಗ, ಅಚ್ಯುತ್ ಕುಮಾರ್, ಮಿತ್ರ, ಅಭಿಷೇಕ್ ದಾಸ್ ಹೀಗೆ ಕಲಾವಿದರ ದಂಡೇ ಈ ಸಿನಿಮಾದಲ್ಲಿದೆ.
















