ಪರ್ಕಳ:ಜ.26 ರಂದು ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

ಪರ್ಕಳ:ಶ್ರೀ ವಿಘ್ನೇಶ್ವರ ಸಭಾಭವನ ಪರ್ಕಳ, ಮಂಗಳಕಲಾ ಸಾಹಿತ್ಯ ವೇದಿಕೆ (ರಿ.) ಪರ್ಕಳ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹಿರೆಬೆಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ಈ ಶಿಬಿರವು ಜನವರಿ 26, 2026 (ಸೋಮವಾರ)ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.00ರವರೆಗೆ ಪರ್ಕಳದ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಲಿದೆ.

ಶಿಬಿರದ ಪ್ರಮುಖ ಸೌಲಭ್ಯಗಳು :
◾ಕಣ್ಣಿನ ಉಚಿತ ತಪಾಸಣೆ ನಡೆಸಲಾಗುತ್ತದೆ.
◾ ಶಿಬಿರದಲ್ಲಿ ಡಯಾಬಿಟಿಕ್ ರೆಟಿನೋಪತಿ ಮತ್ತು ಗ್ಲುಕೋಮಾ ತಪಾಸಣೆ ನಡೆಸಲಾಗುವುದು.
◾ ಅಗತ್ಯ ಉಳ್ಳವರಿಗೆ ರಿಯಾಯಿತಿ ದರದಲ್ಲಿ ಕನ್ನಡಕವನ್ನು ಒದಗಿಸಲಾಗುವುದು ಹಾಗೂ ಉಚಿತವಾಗಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲಾಗುವುದು.
◾ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದವರಿಗೆ ಗೊತ್ತುಪಡಿಸಿದ ದಿನಾಂಕದಂದು ಉಡುಪಿಯ ಪ್ರಸಾದ್ ನೇತ್ರಾಲಯ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿ ಮರುದಿನ ವಾಪಸ್ಸು ಕಳುಹಿಸಲಾಗುವುದು.

ಈ ಶಿಬಿರವು ಪೂರ್ಣವಾಗಿ ಉಚಿತವಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
ಮಧುಕರ್ ಕನ್ನಾರ್ – 9844761421
ಜೆ.ಸಿ. ಎಚ್‌ಜಿಎಫ್. ಭರತ್ ಕೆ. ಕುಲಾಲ್ – 9535682158
ನೆತ್ರಜ್ಯೋತಿ ಟ್ರಸ್ಟ್, ಮಂಗಳೂರು – 7022003202