ಉಡುಪಿ: ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣಾ ಸಮಿತಿ ಉಡುಪಿ ಜಿಲ್ಲೆ ಇವರ ವತಿಯಿಂದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಜನವರಿ 26 ರಂದು ಬೆಳಗ್ಗೆ 8.30 ಕ್ಕೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ
ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದು,
ಶಾಸಕ ಯಶ್ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ
ಎಂ.ಎ. ಗಫೂರ್, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ
ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ
ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ ಹಾಗೂ
ಮತ್ತಿತರರು ಭಾಗವಹಿಸಲಿದ್ದಾರೆ.
















