ಜನವರಿ: ಪ್ರಸಕ್ತ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿಯ ಉಪ ಯೋಜನೆಯಡಿ ಯುವಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿಯ ಯುವಕರಿಗೆ 45 ದಿನಗಳ ಉಚಿತ ಜಿಮ್ ತರಬೇತಿ ಶಿಬಿರವನ್ನು ಫೆಬ್ರವರಿ 1 ರಿಂದ ಮಾರ್ಚ್ 17 ರ ವರೆಗೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಆಸಕ್ತ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ 18 ರಿಂದ 35 ವರ್ಷದೊಳಗಿನ ಪರಿಶಿಷ್ಟ ಜಾತಿಯ ಅರ್ಹ ಯುವಕರು ಪ್ರಸ್ತಾವನೆಗಳನ್ನು ಸಲ್ಲಿಸಲು ಜನವರಿ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 155265 ಅಥವಾ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
















