ಉಡುಪಿ: ಕೋಟ ಮೂಲದ ಡಾ. ಎಚ್​.ವಿ. ಹಂದೆಗೆ ‘ಪದ್ಮಶ್ರೀ’ ಪುರಸ್ಕಾರ

ಉಡುಪಿ: ಕೋಟ ಹಂದಟ್ಟಿನ ಪ್ರಸಿದ್ಧ ಹಂದೆ ಮನೆತನದ 99ರ ಪ್ರಾಯದ ಹಿರಿಯ ವೈದ್ಯ ಡಾ. ಎಚ್​.ವಿ. ಹಂದೆ ಅವರಿಗೆ ವೈದ್ಯಕೀಯ ಕ್ಷೇತ್ರದ ಸೇವೆಗಾಗಿ 2026ರ ಪ್ರತಿಷ್ಠಿತ ‘ಪದ್ಮಶ್ರೀ’ ಪುರಸ್ಕಾರ ಲಭಿಸಿದೆ.

ವೃತ್ತಿಯಲ್ಲಿ ವಕೀಲರಾಗಿದ್ದು, ಬ್ರಿಟಿಷ್​ ಸರ್ಕಾರದಲ್ಲಿ ಅಧಿಕಾರಿಯಾಗಿದ್ದ ಕೋಟದ ಮಾದಪ್ಪ ಹಂದೆ ಪುತ್ರರಾದ ಅವರು, ವೈದ್ಯಕೀಯ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಹೆಸರು ಗಳಿಸಿದವರಾಗಿದ್ದಾರೆ.

ಮಂಗಳೂರು, ಚೆನ್ನೈ, ಕೊಯಮುತ್ತೂರಿನಲ್ಲಿ ಉನ್ನತ ವ್ಯಾಸಂಗ ಮುಗಿಸಿ, ತಮಿಳುನಾಡಿನ ಚೆನ್ನೈನಲ್ಲಿಯೇ ಹಂದೆ ಹಾಸ್ಪಿಟಲ್​ ಸ್ಥಾಪಿಸಿ, ವೈದ್ಯರಾಗಿ ಸೇವೆ ಸಲ್ಲಿಸಿದರು. ತಮಿಳುನಾಡಿನಲ್ಲಿ ಎಂ.ಜಿ. ರಾಮಚಂದ್ರನ್​ ಮುಖ್ಯಮಂತ್ರಿಯಾಗಿದ್ದಾಗ ಅವರ ಸಂಪುಟದಲ್ಲಿ ಆರೋಗ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ರಾಜಕೀಯದಲ್ಲಿ ಕುಶಲತೆ ಸಾಧಿಸಿದ್ದ ಅವರು, ಮುಖ್ಯಮಂತ್ರಿ ಎಂಜಿಆರ್​ ಅನಾರೋಗ್ಯಕ್ಕೊಳಗಾಗಿದ್ದ ಸಂದರ್ಭದಲ್ಲಿ ಸರ್ಕಾರ ಮುನ್ನಡೆಸಿ ಗಮನ ಸೆಳೆದಿದ್ದರು.

ಕಂಬ ರಾಮಾಯಣವನ್ನು ಇಂಗ್ಲಿಷ್​ ಹಾಗೂ ತಮಿಳಿಗೆ ಭಾಷಾಂತರಿಸಿರುವ ಡಾ. ಹಂದೆ, ಸಾಹಿತ್ಯ ವಲಯದಲ್ಲಿಯೂ ಗುರುತಿಸಿಕೊಂಡಿದ್ದಾರೆ.