ಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಮಂಗಳೂರು ಹೊರವಲಯದ ತೊಕ್ಕೊಟ್ಟು ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಅಬೂಬಕರ್ ಸಮದ್, ಕಾಸರಗೋಡು ಕಡಂಬಾರು ನಿವಾಸಿ ಮುಹಮ್ಮದ್ ಅಶ್ರಫ್, ಮುಹಮ್ಮದ್ ಅಫ್ರಿದ್, ಮುಹಮ್ಮದ್ ಅರ್ಷದ್ ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ ಎರಡು ಲಕ್ಷ ರೂ. ಮೌಲ್ಯದ 10 ಕೆ.ಜಿ. ಗಾಂಜಾ, 2.5 ಲಕ್ಷ ಮೌಲ್ಯದ ಹುಂಡೈ ಕಾರು, 50 ಸಾವಿರ ರೂ. ಮೌಲ್ಯದ ಸ್ಕೂಟರ್, 3 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.