ನ.14ರಿಂದ 20: ಜಿಲ್ಲೆಯಾದ್ಯಂತ ನವ ಭಾರತದಲ್ಲಿ ಸಹಕಾರ ಸಂಸ್ಥೆಗಳ‌ ಪಾತ್ರ ಧ್ಯೇಯ‌ ವಾಕ್ಯದಡಿ ಸಹಕಾರ ಸಪ್ತಾಹ

ಉಡುಪಿ: ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ನ. 14ರಿಂದ 20ರ ವರೆಗೆ ಜಿಲ್ಲೆಯಾದ್ಯಂತ ‘ನವ ಭಾರತದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ’ ಎಂಬ ಧ್ಯೇಯ ವಾಕ್ಯದೊಂದಿಗೆ 66ನೇ ಅಖಿಲ ಭಾರತ ಸಹಕಾರ ಸಪ್ತಾಹ ನಡೆಯಲಿದೆ ಎಂದು ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ, ಸಹಕಾರ ಸಚಿವ ಬಸವರಾಜ ಬೊಮ್ಮಾಯಿ ನ. 14ರಂದು ಮಧ್ಯಾಹ್ನ 3 ಗಂಟೆಗೆ ಕಾಪು ಜನಾರ್ದನ ದೇವಸ್ಥಾನದ ಸಭಾಂಗಣದಲ್ಲಿ ಸಪ್ತಾಹಕ್ಕೆ ಚಾಲನೆ ನೀಡುವರು. ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಧ್ವಜಾರೋಹಣ ನೆರವೇರಿಸುವರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧಕ್ಷ ಡಾ.
ಎಂ.ಎನ್‌. ರಾಜೇಂದ್ರ ಕುಮಾರ್‌ ಅಧ್ಯಕ್ಷತೆ ವಹಿಸುವರು ಎಂದರು.
ನ. 15ರಂದು ಬಿದ್ಕಲ್‌ಕಟ್ಟೆ ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ ವಠಾರದಲ್ಲಿ ಬೆಳಿಗ್ಗೆ 10ಗಂಟೆಗೆ  ಸಪ್ತಾಹದ ಎರಡನೇ ದಿನದ ಕಾರ್ಯಕ್ರಮ, 16ರಂದು ಮಧ್ಯಾಹ್ನ 3.30ಕ್ಕೆ ಮಂದಾರ್ತಿ ದುರ್ಗಾಪರಮೇಶ್ವರಿ ಕಲ್ಯಾಣ ಮಂದಿರದಲ್ಲಿ 3ನೇ ದಿನದ ಕಾರ್ಯಕ್ರಮ ಹಾಗೂ 17ಕ್ಕೆ ಮುನಿಯಾಲು ಮಾತಿಬೆಟ್ಟು ಬ್ರಹ್ಮಶ್ರೀ ನಾರಾಯಣ ಗುರುಸಭಾಭವನ ಮಧ್ಯಾಹ್ನ
3ಗಂಟೆಗೆ 4ನೇ ದಿನದ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ನ. 19ರಂದು ಅಜ್ಜರಕಾಡಿನ ಪುರಭವನದಲ್ಲಿ ಮಧ್ಯಾಹ್ನ 3ಗಂಟೆಗೆ ಸಪ್ತಾಹದ 5ನೇ ದಿನದ ಕಾರ್ಯಕ್ರಮ ಹಾಗೂ 20ರಂದು ಖಂಬದಕೋಣೆ ಕರ್ನಾಟಕ ಖಾರ್ವಿ ಹರಿಕಾಂತ ಸಭಾಂಗಣದಲ್ಲಿ ಬೆಳಿಗ್ಗೆ 10ಗಂಟೆಗೆ ಸಪ್ತಾಹದ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಸಹಕಾರ ಸಂಘಗಳ ಉಪನಿಬಂಧಕಿ ಚಂದ್ರಪ್ರತಿಮಾ, ಸಹಕಾರಿಗಳಾದ ಡಾ. ದೇವಿಪ್ರಸಾದ್‌ ಶೆಟ್ಟಿ, ಅಶೋಕ್‌ ಕುಮಾರ್‌ ಬಲ್ಲಾಳ್‌, ಯಶ್‌ಪಾಲ್‌ ಸುವರ್ಣ, ಮಹೇಶ್‌ ಹೆಗ್ಡೆ, ಅಶೋಕ್‌ ಕುಮಾರ್‌ ಶೆಟ್ಟಿ, ಕಟಪಾಡಿ ಶಂಕರ ಪೂಜಾರಿ, ಪಿ.ಎಸ್‌. ಶ್ರೀಧರ, ಎಚ್‌. ಗಂಗಾಧರ ಶೆಟ್ಟಿ, ಎನ್‌. ಮಂಜಯ್ಯ ಶೆಟ್ಟಿ, ಕೃಷ್ಣ ಮೂರ್ತಿ, ಅನಿಲ್‌ ಎಸ್‌. ಪೂಜಾರಿ, ಹರೀಶ್‌ ಶೆಟ್ಟಿ, ಹರೀಶ್‌ ಕಿಣಿ ಮೊದಲಾದವರು ಇದ್ದರು.