ಉಡುಪಿ:ಆರು ದಿನಗಳ ಎನ್ ಎಸ್ ಎಸ್ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ
ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರದ ಸಮಾರೋಪ ಸಮಾರಂಭವು ದಿನಾಂಕ 24 ಜನವರಿ 2026 ರಂದು ಮಂಗಳೂರಿನ ರಾಮಕೃಷ್ಣ ಆಶ್ರಮದಲ್ಲಿ ಮುಕ್ತಾಯಗೊಂಡಿತು.

ಈ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರಿನ ರಾಮಕೃಷ್ಣ ಮಿಷನ್‌ನ ಅಧ್ಯಕ್ಷರಾದ ಸ್ವಾಮಿ ಜಿತಕಮಾನಂದ ಇವರು ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿ ವಿದ್ಯಾರ್ಥಿಗಳಿಗೆ ನಿಸ್ವಾರ್ಥ ಸೇವೆಯ ಮಹತ್ವ, ನೈತಿಕ ಮೌಲ್ಯಗಳು ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರದ ಬಗ್ಗೆ ವಿವರಿಸಿದರು.

ಈ ಶಿಬಿರದಲ್ಲಿ ೩೦೦ರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ಸಾಮಾಜಿಕ ಸೇವೆ, ಜಾಗೃತಿ ಚಟುವಟಿಕೆಯಲ್ಲಿ
ಭಾಗವಹಿಸಿದರು ಮತ್ತು ಶಿಸ್ತು, ತಂಡದ ಕೆಲಸ, ನಾಯಕತ್ವ ಮತ್ತು ಸಾಮಾಜಿಕ ಜವಾಬ್ದಾರಿಯ ಬಗ್ಗೆ ಅಮೂಲ್ಯವಾದ ಪಾಠವನ್ನು ಕಲಿತರು.

ಈ ಸಮಾರೋಪ ಸಮಾರಂಭದಲ್ಲಿ ಎಲ್ಲಾ ರಾಷ್ಟ್ರೀಯ ಸೇವಾ
ಯೋಜನೆಯ ಪದಾಧಿಕಾರಿಗಳು, ಅಧ್ಯಾಪಕ ಸಂಯೋಜಕರು
ಮತ್ತು ಸ್ವಯಂಸೇವಕರು ಉಪಸ್ಥಿತರಿದ್ದರು.