ಉಡುಪಿ:ಅಂಚೆ ಇಲಾಖೆ ವತಿಯಿಂದ ಪತ್ರ ಲೇಖನ ಸ್ಪರ್ಧೆ

ಉಡುಪಿ: ಅಂಚೆ ಇಲಾಖೆಯು ಯು.ಪಿ.ಯು ಇಂಟರ್‌ನ್ಯಾಷನಲ್ ಲೆಟರ್ ರೈಟಿಂಗ್ ಕಾಂಪಿಟೇಷನ್ ಪ್ರಯುಕ್ತ 9 ರಿಂದ 15 ವರ್ಷದ ಒಳಗಿನ ವಿದ್ಯಾರ್ಥಿಗಳಿಗೆ “Write a letter to a friend about why human connection matters in a digital world” ಎಂಬ ವಿಷಯದ ಕುರಿತು ಪತ್ರ ಲೇಖನ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದು, ಸ್ಪರ್ಧಾಳುಗಳು ಪತ್ರಲೇಖನವನ್ನು ಹಿಂದಿ, ಇಂಗ್ಲೀಷ್ ಅಥವಾ ಪ್ರಾದೇಶಿಕ ಭಾಷೆಯಲ್ಲಿ 800 ಶಬ್ದಗಳು ಮೀರದಂತೆ ಕೈ ಬರಹದಲ್ಲಿ ನಿಗಧಿಪಡಿಸಿದ ಕೇಂದ್ರದಲ್ಲಿ ಬರೆಯಬಹುದಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ತಮ್ಮ ಶಾಲೆಯ ಮುಖಾಂತರ ಫೆಬ್ರವರಿ 14 ರ ಒಳಗಾಗಿ ಅಂಚೆ ಅಧೀಕ್ಷಕರು, ಉಡುಪಿ ಅಂಚೆ
ವಿಭಾಗ, ಉಡುಪಿ ಇಲ್ಲಿಗೆ ಸಲ್ಲಿಸಬಹುದಾಗಿದೆ. ಅತ್ಯುತ್ತಮ ಮೂರು ಪತ್ರಲೇಖನಗಳಿಗೆ ಬಹುಮಾನಗಳನ್ನು ದೇಶೀಯ ಮಟ್ಟದಲ್ಲಿ
ಕ್ರಮವಾಗಿ 50,000, 25,000, 10,000 ಮತ್ತು ಕರ್ನಾಟಕ ವೃತ್ತ ಮಟ್ಟದಲ್ಲಿ 25,000, 10,000 ಮತ್ತು 5,000 ರೂ.
ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಂಚೆ ಅಧೀಕ್ಷಕರು, ಉಡುಪಿ ಅಂಚೆ ವಿಭಾಗ, ಉಡುಪಿ ದೂ.ಸಂಖ್ಯೆ: 0820-2526144, 2520471 ಹಾಗೂ
2521780 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಂಚೆ ಅಧೀಕ್ಷಕರ ಕಛೇರಿ ಪ್ರಕಟಣೆ ತಿಳಿಸಿದೆ.