ಮಂಗಳೂರು: ಕಾಂಗ್ರೆಸ್ ಸರ್ಕಾರ ಇದ್ದಾಗ, ಕೇವಲ ಟಿಪ್ಪು ಜಯಂತಿ ಮಾತ್ರವಲ್ಲದೇ ವಿವಿಧ ಜಯಂತಿಗಳನ್ನು ಆಚರಿಸಿದ್ದೇವೆ. ಆದ್ರೆ ಬಿಜೆಪಿಯವರು ಸಂಕುಚಿತ ಮನೋಭಾವದಿಂದ ಟಿಪ್ಪು ಜಯಂತಿ ಆಚರಣೆ ಮಾಡುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮಂಗಳೂರಿನಲ್ಲಿ ಮಹಾನಗರ ಪಾಲಿಕೆಯ ಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಬಿಜೆಪಿಯವರಿಗೆ ಸುಳ್ಳು ಹೇಳೋದು ಬಿಟ್ಟು ಬೇರೆ ಯಾವುದು ಗೊತ್ತಿಲ್ಲ. ಸುಳ್ಳು ಎನ್ನೋದು ಬಿಜೆಪಿಗೆ ಅನರ್ಥ ನಾಮ ಇದ್ದಂತೆ ಎಂದು ವ್ಯಂಗ್ಯವಾಡಿದರು.
ಯಡಿಯೂರಪ್ಪ, ದೇವೇಗೌಡ ಜೊತೆಗೆ ಪೋನ್ ಮೂಲಕ ಮಾತನಾಡಿದ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿ, ಯಾರ ಜೊತೆಗೆ ಬೇಕಾದರೂ ಮಾತನಾಡಲಿ ನಮಗೆ ಏನು ತೊಂದರೆ ಇಲ್ಲ. ಅದು ಅವರಿಗೆ ಬಿಟ್ಟ ವಿಚಾರ, ನಮ್ಮ ತಕರಾರು ಏನು ಇಲ್ಲ ಎಂದರು.
ಮುಂದಿನ ಚುನಾವಣೆಯಲ್ಲಿ ೮ ಸೀಟ್ ಗೆಲ್ಲದೇ ಇದ್ರೆ ಚುನಾವಣೆ ಬರುತ್ತದೆ. ೮ ಸೀಟ್ ಗೆಲ್ಲುವುದಿಲ್ಲ. ಹೀಗಾಗಿ ಬಿಜೆಪಿ ಸರಕಾರ ಬೀಳುತ್ತದೆ. ಅಲ್ಲದೇ ಯಡಿಯೂರಪ್ಪ ಆಡಿಯೋ ಲೀಕ್ ಮಾಡಿದ್ದು ಯಾರು.? ಬಿಜೆಪಿಯವರೇ ಯಡಿಯೂರಪ್ಪ ಅವರನ್ನು ಕೆಳಗಿಲಿಸಲು ಕಾಯುತ್ತಿದ್ದಾರೆ. ಬಿಜೆಪಿಯವರು ಯಡಿಯೂರಪ್ಪ ವಿರುದ್ಧ ಕುತಂತ್ರ ಮಾಡುತ್ತಿದ್ದಾರೆ.
ದೇಶದಲ್ಲಿ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.












