ಹೆಮ್ಮಾಡಿ:ಜನತಾ ಪಿಯು ಕಾಲೇಜು ಹೆಮ್ಮಾಡಿ ಕುಲಾಲ ಸಮಾಜ ಸುಧಾರಕ ಸಂಘ (ರಿ.),ಕುಂದಾಪುರ ಹಾಗೂ ಜೆ ಸಿ ಐ ಕುಂದಾಪುರ ಸಿಟಿ ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ (ನಿ.), ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಟೀಮ್ ಈಶ್ವರ್ ಮಲ್ಪೆ ಇವರ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ
ದಿ.20-02-2026 ಶುಕ್ರವಾರ ಬೆಳಗ್ಗೆ 10:00 ರಿಂದ 5:00 ರವರೆಗೆ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ನಡೆಯಲಿದೆ.
ಟೀಮ್ ಈಶ್ವರ್ ಮಲ್ಪೆಯವರು ಅನೇಕ ಸಾಮಾಜಿಕ ಕಾರ್ಯವನ್ನು ಮುಂದುವರಿಸಿಕೊಂಡು ಬರುತ್ತಿದ್ದು ಈಗ ಶ್ರವಣದ ಸಮಸ್ಯೆಯಿಂದ (ಕೇಳಿಸಿಕೊಳ್ಳುವ ಸಮಸ್ಯೆ) ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಉಚಿತ ಶಿಬಿರವನ್ನು ಮಾಡುತ್ತಿದ್ದು, ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಟೀಮ್ ಈಶ್ವರ್ ಮಲ್ಪೆಯವರು ಶ್ರವಣದ ಯಂತ್ರಕ್ಕೆ (Hearing Machine) ಆಗುವ ವೆಚ್ಚದ ಶೇಕಡಾ 40% ಮೊತ್ತವನ್ನು ಭರಿಸಲಾಗುತ್ತಿದ್ದು ರೋಗಿಗಳು ಈ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿ. ಟೀಮ್ ಈಶ್ವರ್ ಮಲ್ಲೆ ಮತ್ತು ಜನತಾ, ಪಿ ಯು ಕಾಲೇಜ್ ಹೆಮ್ಮಾಡಿ ಕುಲಾಲ ಸಮಾಜ ಸುಧಾರಕ ಸಂಘ (ರಿ.), ಕುಂದಾಪುರ, ಜೆ ಸಿ ಐ ಕುಂದಾಪುರ ಸಿಟಿ, ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ (ನಿ.), ಹೆಮ್ಮಾಡಿ ಇವರು ಆಯೋಜಿಸಿರುವ ಈ ಶಿಬಿರದಲ್ಲಿ ನಿಮ್ಮ ಪ್ರೀತಿಪಾತ್ರರಿಗೆ ಕೇಳಿಸಿಕೊಳ್ಳುವ ತೊಂದರೆ ಇರುವವರಿಗೆ ಇದರ ಸದುಪಯೋಗ ಮಾಡಿಕೊಳ್ಳಬಹುದು ಹಾಗೂ ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು.
ಸೂಚನೆಗಳು:
▪️ನೋಂದಣಿ ಕಡ್ಡಾಯವಾಗಿದೆ ಕರೆಮಾಡಿ ನೋಂದಾಯಿಸಿಕೊಳ್ಳಿ.
▪️ ಹಿರಿಯರಿಗೆ ಮೊದಲ ಆದ್ಯತೆ.
▪ಶ್ರವಣ ಪರೀಕ್ಷೆಯ ಯಾವುದಾದರೂ ಹಳೆಯ ವರದಿ (Old Report) ಇದ್ದರೆ ಜೊತೆಯಲ್ಲಿ ತನ್ನಿ.
▪ಮೊದಲು ನೋಂದಾಯಿಸುವ 30 ಜನರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು.
▪ಅಂತಾರಾಷ್ಟ್ರೀಯ ಸಂಸ್ಥೆಯಲ್ಲಿ ಅನುಭವ ಪಡೆದಿರುವ ವೈದ್ಯರು ಈ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ.
▪ ಈಶ್ವರ್ ಮಲ್ಪೆ ಟೀಮ್ ನವರು ದೇಣಿಗೆ ಮೊತ್ತದಿಂದ 40% ಶ್ರವಣ ಸಾಧನದ ಮೊತ್ತವನ್ನು ಪಾವತಿಸುತ್ತಾರೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 8951804399
















