ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ ಜನವರಿ 30: ಬ್ರಹ್ಮಾವರ ತಾಲೂಕು ಉಪ್ಪೂರು ಗ್ರಾಮದ ತೆಂಕಬೆಟ್ಟು ನಿವಾಸಿ ಸಂದೀಪ ಎ (37) ಎಂಬ ವ್ಯಕ್ತಿಯು ಡಿಸೆಂಬರ್ 20 ರಂದು ಕೆಲಸಕ್ಕೆಂದು ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 4 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ಮರಾಠಿ ಭಾಷೆ
ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲಿಸ್ ಠಾಣೆಗೆ ಮಾಹಿತಿ ನೀಡುವಂತೆ ಬ್ರಹ್ಮಾವರ ಪೊಲಿಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.