ಉಡುಪಿ:ನಗರ ಪ್ರದೇಶಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ನೀಡಿರುವುದು ಸ್ವಾಗತಾರ್ಹ- ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ.

ಉಡುಪಿ:ನಗರ ಪ್ರದೇಶಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ನೀಡಿರುವುದು ಸ್ವಾಗತಾರ್ಹ.ಹೈ ಸ್ಪೀಡ್ ರೈಲ್ವೆ ಕಾರಿಡಾರ್ ಬೆಂಗಳೂರಿಗೂ ವಿಸ್ತರಣೆ ಮಾಡಿರುವುದು ಶ್ಲಾಘನೀಯ.ಟ್ಯೂರಿಸಂ ಬೆಳವಣಿಗೆಗೆ ಪೂರಕವಾಗಿ ಮೆಡಿಕಲ್‌ ಟ್ಯುಾರಿಸಂ ಹೆಸರಿನಲ್ಲಿ ಐದು ಪ್ರದೇಶದಲ್ಲಿ ಮೆಡಿಕಲ್‌ ಹಬ್ ಸ್ಥಾಪನೆಗೆ ಮುಂದಾಗಿರುವುದು ಉದ್ಯೋಗ ಸೃಷ್ಟಿಕೆ ಸಹಾಯಕವಾಗ ಬಹುದು ಅನ್ನುವುದು ಸರ್ಕಾರದ ನಿರೀಕ್ಷೆ.ಪಶುವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಹೆಚ್ಚಿನ ಅನುದಾನದ ಭರವಸೆ ಆಶಾದಾಯಕ.ಸಣ್ಣ ಕೈಗಾರಿಕೆ ಮತ್ತು ಖಾದಿ ಗುಡಿಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚಿನ ಉತ್ತೇಜನ ಕ್ರಮ ಸ್ವಾಗತಾರ್ಹ.

ಕರಾವಳಿಯ ಪ್ರದೇಶದ ಮೀನುಗಾರರ ಸಹಕಾರಿ ಸಂಸ್ಥೆ ಸ್ಥಾಪನೆ ಬಗ್ಗೆ ಬಜೆಟ್ ನಲ್ಲಿ ಒತ್ತು ನೀಡಿರುವುದು ಬಜೆಟ್ ನಲ್ಲಿ ಕಾಣುವ ಉತ್ತಮ ಅಂಶ.ಜಿ ಎಸ್ ಟಿ ಸರಳೀಕೃತ ನಿಧಾ೯ರ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಸಮಾಧಾನಕರ ಬಜೆಟ್. ಕ್ಯಾನ್ಸರ್‌ ನಂತಹ ಪ್ರಮುಖ ಖಾಯಿಲೆಗಳ ಔಷಧಿಗಳಿಗೆ ತೆರಿಗೆ ವಿನಾಯಿತಿ ತೇೂರಿರುವುದು ಬಜೆಟ್ ನಲ್ಲಿ ಕಾಣುವ ಇನ್ನೊಂದು ಪ್ರಮುಖ ಅಂಶ.

2047 ತನಕ ಭಾರತದಲ್ಲಿ ವಿದೇಶಿ ಕಂಪನಿಗಳ ಬಂಡವಾಳ ಹೂಡಿಕೆಗೆ ತೆರಿಗೆ ವಿನಾಯಿತಿ ನೀಡಿರುವುದರಿಂದ ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡಬಹುದು.ಒಟ್ಟಿನಲ್ಲಿ ವಿತ್ತ ಸಚಿವರು ಮಂಡಿಸಿದ ಬಜೆಟ್ ಅಭಿವೃದ್ಧಿ ಜನಪರ ಯೇೂಗ ಕ್ಷೇಮದ ದೃಷ್ಟಿಯಿಂದ ಹೊಸದೊಂದು ಕನಸು ಮೂಡಿಸಿದೆ.ಕೃತಕ ಬುದ್ಧಿ ಮತ್ತೆಗೆ ಎಲ್ಲಾ ವಲಯದಲ್ಲಿ ವಿಶೇಷ ಮಹತ್ವ ಕೊಟ್ಟಿರುವುದು ಉತ್ತಮ ನಿಧಾ೯ರ ಆದರೆ ಮಾನವ ಸಂಪತ್ತು ಬಳಕೆಗೆ ಕಡಿವಾಣ ಬೀಳುತ್ತದೆ ಅನ್ನುವ ಅಭಿಪ್ರಾಯ ನಡುವೆ ನಿರುದ್ಯೋಗ ಸಮಸ್ಯೆ ಇನ್ನಷ್ಟು ಹೆಚ್ಚಾಗಿಕಾಡ ಬಹುದು ಅನ್ನಿಸುತ್ತದೆ.

ಜನಸಾಮಾನ್ಯರ ಮುಂದಿರುವ ಬಹು ದೊಡ್ಡ ಪ್ರಶ್ನೆ ಅಂದರೆ ಕಳೆದ ಆಥಿ೯ಕ ವರುಷದಲ್ಲಿ ಮಂಡಿಸಿದ ಬಜೆಟ್ ಎಷ್ಟರ ಮಟ್ಟಿಗೆ ಅನುಷ್ಠಾನ ಗೊಂಡಿದೆ ಅನ್ನುವ ಲೆಕ್ಕಾಚಾರ ಪ್ರಸ್ತುತ ಬಜೆಟ್ ನಲ್ಲಿ ಎಲ್ಲಿಯೂ ಉಲ್ಲೇಖಿಸದೇ ಇರುವುದು ವಿಷಾದನೀಯ.

ಜನಸಾಮಾನ್ಯರಿಗೆ ಯಾವುದೇ ಬಜೆಟ್ ಮೇಲೆ ವಿಶ್ವಾಸಾರ್ಹತೆ ಮೂಡಿಬರ ಬೇಕಾದರೆ ಹಿಂದಿನ ಬಜೆಟ್ ಮೇಲಿನ ಪ್ರಗತಿಯ ಕುರಿತಾಗಿ ಸದನಕ್ಕೆ ಮಾಹಿತಿ ನೀಡುವಕಾರ್ಯ ನಡೆಯಲೇ ಬೇಕು ಅನ್ನುವುದು ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಅವರ ಸ್ವಷ್ಟ ಅಭಿಪ್ರಾಯ.