ಪ್ರಯಾಣಿಕರಿಗೆ ಗುಡ್ ನ್ಯೂಸ್; ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ರೈಲು.!

ಉಡುಪಿ: ಮಹಾ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಯಶವಂತಪುರ ಮತ್ತು ಮಡಗಾಂವ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸಂಚರಿಸಲಿದೆ.

ಈ ಹಿನ್ನೆಲೆಯಲ್ಲಿ ರೈಲು ಸಂಖ್ಯೆ 06507 / 06508 ಯಶವಂತಪುರ ಮತ್ತು ಮಡಗಾಂವ್‌ ಜಂಕ್ಷನ್‌ ನಡುವೆ ಯಶವಂತಪುರ ಎಕ್ಸ್‌ಪ್ರೆಸ್‌ ವಿಶೇಷ ರೈಲು ಸಂಚಾರ ನಡೆಸಲಿದೆ.

ರೈಲು ಸಂಖ್ಯೆ 06507 ಯಶವಂತಪುರ ಎಕ್ಸ್‌ಪ್ರೆಸ್‌ ವಿಶೇಷ ರೈಲು ಫೆ. 13ರಂದು ಮಧ್ಯಾಹ್ನ 12.30ಕ್ಕೆ ಯಶವಂತಪುರದಿಂದ ಹೊರಟು, ಫೆ. 14ರಂದು ಬೆಳಗ್ಗೆ 6.45ಕ್ಕೆ ಮಡಗಾಂವ್‌ ಜಂಕ್ಷನ್‌ ತಲುಪಲಿದೆ. ರೈಲು ಸಂಖ್ಯೆ 06508 ಯಶವಂತಪುರ ಎಕ್ಸ್‌ಪ್ರೆಸ್‌ ರೈಲು ಫೆ. 16 ರಂದು ಬೆಳಗ್ಗೆ 11 ಕ್ಕೆ ಮಡಗಾಂವ್‌ ಜಂಕ್ಷನ್‌ನಿಂದ ಹೊರಟು, ಫೆ. 17ರಂದು ಬೆಳಗ್ಗೆ 4.45ಕ್ಕೆ ಯಶವಂತಪುರ ತಲುಪಲಿದೆ.

ವಿಶೇಷ ರೈಲು ಸುಬ್ರಹ್ಮಣ್ಯ ರಸ್ತೆ, ಕಬಕ, ಪುತ್ತೂರು, ಬಂಟ್ವಾಳ, ಸುರತ್ಕಲ್‌, ಮೂಲ್ಕಿ, ಉಡುಪಿ, ಬಾಕೂìರು, ಕುಂದಾಪುರ, ಮೂಕಾಂಬಿಕಾ ರಸ್ತೆ ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರಸ್ತೆ, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲುಗಡೆ ಮಾಡಲಿದೆ.ವಿಶೇಷ ರೈಲುಗಳ ಸೇವೆ ವಿಸ್ತರಣೆ
ಉಡುಪಿ: ಪ್ರಯಾಣಿಕರ ದಟ್ಟಣೆ ಹಿನ್ನೆಲೆಯಲ್ಲಿ ಆರಂಭಿಸಲಾದ ಕೆಲವು ವಿಶೇಷ ರೈಲುಗಳ ಸೇವೆಯನ್ನು ವಿಸ್ತರಿಸಲಾಗಿದೆ.

ಬುಧವಾರ ಮತ್ತು ರವಿವಾರ ಸೂರತ್‌ ಮತ್ತು ಮಂಗಳೂರು ಜಂಕ್ಷನ್‌ ನಡುವೆ ಸಂಚರಿಸುವ ಸೂರತ್‌ ಸ್ಪೆಷಲ್‌ ಎಕ್ಸ್‌ಪ್ರೆಸ್‌ ಸೇವೆಯನ್ನು ಫೆ. 25ರ ವರೆಗೆ ವಿಸ್ತರಣೆ ಮಾಡಲಾಗಿದೆ.

ಈ ರೈಲು ಸಂಜೆ 7.35ಕ್ಕೆ ಸೂರತ್‌ನಿಂದ ಹೊರಡಲಿದೆ. ಗುರುವಾರ ಮತ್ತು ಸೋಮವಾರ ಸೂರತ್‌ ಮತ್ತು ಮಂಗಳೂರು ಜಂಕ್ಷನ್‌ ನಡುವೆ ಸಂಚರಿಸುವ ಸೂರತ್‌ ಸ್ಪೆಷಲ್‌ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 09058) ಸೇವೆಯನ್ನು ಫೆ. 26ರ ವರೆಗೆ ವಿಸ್ತರಿಸಲಾಗಿದ್ದು, ರಾತ್ರಿ 10:30ಕ್ಕೆ ಮಂಗಳೂರಿನಿಂದ ಹೊರಡಲಿದೆ ಎಂದು ಪ್ರಕಟನೆ ತಿಳಿಸಿದೆ.