ನ.12: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಕುಂದಾಪುರ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ನ.೧೨ರ ಸಂಜೆ ೫ಗಂಟೆಗೆ ಇಲ್ಲಿನ ಪದವಿಪೂರ್ವ ಕಾಲೇಜು ರೋಟರಿ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ನಡೆಯಲಿದೆ.

ಖ್ಯಾತ ಪತ್ರಕರ್ತ, ಚಿಂತಕ ದಿನೇಶ್ ಅಮೀನ್ ಮಟ್ಟು ಕವಲು ದಾರಿಯಲ್ಲಿ ಪತ್ರಕರ್ತರು ಎಂಬ ವಿಷಯದ ಬಗ್ಗೆ ವಿಶೇಷ ದಿಕ್ಸೂಚಿ ಭಾಷಣ ಮಾಡಲಿದ್ದು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕುಂದಾಪುರ ಎಎಸ್ಪಿ ಹರಿರಾಮ್ ಶಂಕರ್, ಕುಂದಾಫುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಎ.ಎಸ್.ಎನ್ ಹೆಬ್ಬಾರ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಕೆ.ಸಿ.ರಾಜೇಶ್, ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಜನಾರ್ದನ್ ಮರವಂತೆ, ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಉಪಸ್ಥಿತರಿರಲಿದ್ದಾರೆ ಎಂದು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ ಹಾಗೂ ಕಾರ್ಯದರ್ಶಿ ನಾಗರಾಜ ರಾಯಪ್ಪನಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.