ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಇಲ್ಲಿನ ಎಂಬಿಎ ವಿಭಾಗದ ವತಿಯಿಂದ ದಿನಾಂಕ 4 ಫೆಬ್ರವರಿ 2026ರಂದು ಕಾರ್ಪೊರೇಟ್ ಪರ್ಫಾರ್ಮೆನ್ಸ್ ಮ್ಯಾನೇಜ್ಮೆಂಟ್ ಎಂಬ ವಿಷಯದ ಬಗ್ಗೆ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ಸೆಲ್ ಮತ್ತು ಡಿಪಾರ್ಟ್ಮೆಂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಜೊತೆಗೂಡಿ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ಕಾರ್ಯಗಾರವನ್ನು ಕೈಗೊಳ್ಳಲಾಯಿತು.
ಈ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಬಿ. ದಯಾನಂದ್ ಶೆಟ್ಟಿ , ಡೈರೆಕ್ಟರ್ ಅಂಡ್ ಸೀನಿಯರ್ ಕನ್ಸಲ್ಟೆಂಟ್ ಪ್ರೊಜಿನ್ ಟೆಕ್ಸ್ ಇವರು ಆಗಮಿಸಿ ಹೇಗೆ ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಬಹುದು ಮತ್ತು ಅದಕ್ಕೆ ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ, ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು. ಎಂಬಿಎ ವಿದ್ಯಾರ್ಥಿನಿ ಕುಮಾರಿ ಅದಿತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
















