ಉಡುಪಿ: ಯುವ ಜನರಲ್ಲಿ ಸೃಜನಶೀಲತೆ ಮತ್ತು ನಾಯಕತ್ವ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸುವ ದೃಷ್ಟಿಯಿಂದ ಯುವ
ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಭಾರತೀಯ ರೆಡ್ಕ್ರಾಸ್ನ ಸಹಯೋಗದೊಂದಿಗೆ ಫೆಬ್ರವರಿ 12 ಮತ್ತು 13 ರಂದು ಎರಡು ದಿನಗಳ ತರಬೇತಿ ಶಿಬಿರವನ್ನು ಬ್ರಹ್ಮಗಿರಿಯ ರೆಡ್ಕ್ರಾಸ್ ಭವನದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲೆಯ ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಅಧ್ಯಯನ ಮಾಡುತ್ತಿರುವ ಮತ್ತು ಪದವಿ ಪೂರ್ಣಗೊಳಿಸಿದ 29 ವರ್ಷದ ಒಳಗಿನ ಯುವ ಜನರು ಶಿಬಿರದಲ್ಲಿ ಭಾಗವಹಿಸಬಹುದಾಗಿದ್ದು, ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ, ಭಾರತೀಯ ರೆಡ್ಕ್ರಾಸ್, ಬ್ರಹ್ಮಗಿರಿ, ಉಡುಪಿ ಮೊ.8310311448 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
















