ಉಡುಪಿ:ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ : ಉದ್ಘಾಟನಾ ಕಾರ್ಯಕ್ರಮ

ಉಡುಪಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆಯ ಉದ್ಘಾಟನಾ ಕಾರ್ಯಕ್ರಮವು ಫೆಬ್ರವರಿ 10 ರಂದು ಮಧ್ಯಾಹ್ನ 12.45 ಕ್ಕೆ ಉಡುಪಿಯ ಬಾಲಕಿಯರ ಸರಕಾರಿ
ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಇಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಪೂರ್, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ.ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ
ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕರ ಹರಿರಾಮ್ ಶಂಕರ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.