ಉಳ್ಳಾಲ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿಉರಿದ ಘಟನೆ ಮಂಗಳೂರು ಉಳ್ಳಾಲದ ಕೋಟೆಕಾರು ಅಡ್ಕ ಬಳಿ ರಾ.ಹೆ 66 ರಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ.
ತಲಪಾಡಿ ನಿವಾಸಿ ರಿಯಾಝ್ ಎಂಬವರು ಗುರುವಾರ ಮಧ್ಯಾಹ್ನ ಅಡ್ಕದ ಗ್ಯಾರೇಜ್ ಒಂದರಲ್ಲಿ ದುರಸ್ತಿಗೊಳಿಸಲಾಗಿದ್ದ ತನ್ನ ಓಮ್ನಿ ಕಾರನ್ನು ವಾಪಸು ಪಡೆದು ಪೆಟ್ರೋಲ್ ತುಂಬಿಸಿ ತಲಪಾಡಿಯತ್ತ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರಲ್ಲಿ ಹೊಗೆ ಕಾಣಿಸಿಕೊಂಡಿದೆ.
ಕಾರಿನಲ್ಲಿ ಬೆಂಕಿ ಹತ್ತಿದ ವಿಚಾರ ರಿಯಾಝ್ ಅವರ ಗಮನಕ್ಕೆ ಬಂದಿಲ್ಲ. ಈ ವೇಳೆ ಹಿಂದಿನಿಂದ ಬರುತ್ತಿದ್ದ ವಾಹನ ಸವಾರ ಮುನ್ಸೂಚನೆ ನೀಡಿದ್ದು, ಕೂಡಲೇ ಎಚ್ಚೆತ್ತ ರಿಯಾಝ್ ಅವರು ಓಮ್ನಿ ಕಾರನ್ನು ಪಕ್ಕ ನಿಲ್ಲಿಸಿ ಕಾರಿನಿಂದ ಇಳಿದು ಪ್ರಾಣ ಉಳಿಸಿಕೊಂಡಿದ್ದಾರೆ.

















