ಉಡುಪಿ: ಬ್ರಹ್ಮಾವರ ತಾಲೂಕು ಮೂಡುಗಿಳಿಯಾರು ನಿವಾಸಿ ಚೆನ್ನ ಪೂಜಾರಿ (52) ಎಂಬ ವ್ಯಕ್ತಿಯು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕಳೆದ ಏಳು ತಿಂಗಳಿನಿಂದ ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ.
5 ಅಡಿ 4 ಇಂಚು ಎತ್ತರ, ಕೋಲು ಮುಖ, ಗೋಧಿ ಮೈ ಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕಿವುಡ ಹಾಗೂ ಮೂಗರಾಗಿರುತ್ತಾರೆ. ಈತನ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ.ಸಂ: 0820-2564155, ಮೊ.ನಂ: 9480805454 ಅಥವಾ ಉಡುಪಿ ವೃತ್ತ ನಿರೀಕ್ಷಕರ ಕಚೇರಿ ದೂ.ಸಂ:0820-2561966, ಮೊ.ನಂ: 9480805432 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೋಟ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
















