ಉಡುಪಿ:ಫೆ.15 ರಂದು ಸಂತ ಸೇವಾಲಾಲ ಜಯಂತಿ

ಉಡುಪಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕೃಷ್ಣ ನಗರಿ ಶ್ರೀ ಸಂತ ಸೇವಾಲಾಲ್ ಬಂಜಾರ ಸಂಘ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಶ್ರೀ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮವು ಫೆಬ್ರವರಿ 15 ರಂದು ಬೆಳಗ್ಗೆ 10 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಕರಾವಳೀ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ, ಕೃಷ್ಣ ನಗರಿ ಶ್ರೀ ಸಂತ ಸೇವಾಲಾಲ್ ಬಂಜಾರ ಸಂಘ ಜಿಲ್ಲಾ ಅಧ್ಯಕ್ಷ ಕುಮಾರ್ ಕೆ.ಎಂ ಹಾಗೂ
ಮತ್ತಿತರರು ಭಾಗವಹಿಸಲಿದ್ದು, ಕಳತ್ತೂರು ಪಿ.ಕೆ.ಎಸ್ ಪ್ರೌಢಶಾಲೆಯ ಸಹ ಶಿಕ್ಷಕ ಸಂತೋಷ್ ಅ. ರಾಠೋಡ ಉಪನ್ಯಾಸ ನೀಡಲಿದ್ದಾರೆ.