ಉಡುಪಿ: ಉಡುಪಿ ತಾಲೂಕಿನ ಮೂಡುತೋನ್ಸೆ ಗ್ರಾಮದ ನೇಜಾರು ರಾಜೀವ ನಗರದ ನಿವಾಸಿ ಸತೀಶ್ (43) ಎಂಬ ವ್ಯಕ್ತಿಯು
ಕಳೆದ ಡಿಸೆಂಬರ್ ತಿಂಗಳಿನಲ್ಲಿ ಮನೆಯಿಂದ ಕೆಲಸಕ್ಕೆಂದು ತೆರಳಿದ್ದವರು ವಾಪಸು ಬರದೆ ನಾಪತ್ತೆಯಾಗಿರುತ್ತಾರೆ.
5 ಅಡಿ 6 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು ತುಳು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ
ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2537999, ಮಲ್ಪೆ ಪಿ.ಎಸ್.ಐ ನಂ:9480805447, ಮಲ್ಪೆ ವೃತ್ತ ನಿರೀಕ್ಷಕರು
ಮೊ.ನಂ:9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣಾ ಕಚೇರಿ ಪ್ರಕಟಣೆ ತಿಳಿಸಿದೆ.
















