ಉಡುಪಿ: ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ವತಿಯಿಂದ 300ನೇ ರಕ್ತದಾನ ಶಿಬಿರ “ಹೆಗ್ಗುರುತು- 300” ಅನ್ನು ಇದೇ ಫೆ. 22ರಂದು ಬೆಳಿಗ್ಗೆ 8.30ರಿಂದ 1ಗಂಟೆಯವರೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯ ಡಾ.ಟಿಎಂಎ ಪೈ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲ್ಯಾನ್ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 9.30ಕ್ಕೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ದಿನೇಶ್ ಹೆಗ್ಡೆ ಆತ್ರಾಡಿ ಅಧ್ಯಕ್ಷತೆ ವಹಿಸಲಿದ್ದಾರೆ.
11 ಗಂಟೆಗೆ ರಕ್ತದಾನಿಗಳಿಗೆ ಸ್ಮರಣಿಕೆ ಹಾಗೂ ಪ್ರಶಂಸಾ ಪತ್ರ ವಿತರಣೆ ಕಾರ್ಯಕ್ರಮ ನಡೆಯಲಿದೆ. ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

















