ಬ್ರಹ್ಮಾವರ: ಗೂಡ್ಸ್ ವಾಹನವೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಆರೂರು ಕ್ರಾಸ್ (ಕುಂಜಾಲು) ಎಂಬಲ್ಲಿ ಫೆ.20ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಆರೂರಿನ ಶೇಖರ್ ಟಿ.ಕುಲಾಲ್ ಎಂದು ಗುರುತಿಸಲಾಗಿದೆ. ಆರೂರು ಮುಖ್ಯ ರಸ್ತೆಯನ್ನು ದಾಟಿ ಡಿವೈಡರ್ ಪಾಸ್ ಮಾಡುತ್ತಿದ್ದ ಸ್ಕೂಟರ್ಗೆ ಪೇತ್ರಿ ಕಡೆಯಿಂದ ಬ್ರಹ್ಮಾವರ ಕಡೆಗೆ ಹೋಗುತ್ತಿದ್ದ ಗೂಡ್ಸ್ ವಾಹನ ಹಿಂದಿನಿಂದ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಶೇಖರ್ ಕುಲಾಲ್ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
















