ಉಡುಪಿ:ರೇಣುಕಾಚಾರ್ಯ ಜಯಂತಿ ಮತ್ತು ಯೋಗಿ ನಾರೇಯಣ ಯತೀಂದ್ರ ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇದರ ಸಹಯೋಗದಲ್ಲಿ ರೇಣುಕಾಚಾರ್ಯ ಜಯಂತಿ ಮತ್ತು ಯೋಗಿ ನಾರೇಯಣ ಯತೀಂದ್ರ ಜಯಂತಿ ಕಾರ್ಯಕ್ರಮವು ಮಾರ್ಚ್ 3 ರಂದು ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆಯಲಿದೆ.

.ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಶಾಸಕರುಗಳಾದ ವಿ.ಸುನಿಲ್ ಕುಮಾರ್, ಗುರುರಾಜ್
ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್.
ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಕರಾವಳಿ ಅಭಿವೃದ್ದಿ
ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್
ಕೊಡವೂರು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ
ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.