ಕಾರ್ಕಳ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ರಿಕ್ಷಾ ಚಾಲಕನ ಬಂಧನ

ಕಾರ್ಕಳ: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಆರೋಪದಲ್ಲಿ ರಿಕ್ಷಾ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಬೋಳ ನಿವಾಸಿ ಅಮರನಾಥ್ ಪೂಜಾರಿ(31) ಬಂಧಿತ ಆರೋಪಿ. 16ವರ್ಷ ಪ್ರಾಯದ ಬಾಲಕಿ ಫೆ.25ರಂದು ಶಾಲೆ ಮುಗಿಸಿ ಮನೆಗೆ ತೆರಳಿದ್ದಾಗ ಅಮರನಾಥ್, ಮನೆಗೆ ಬಿಡುವುದಾಗಿ ನಂಬಿಸಿ ಆಕೆಯನ್ನು ಕರೆದು ಕೊಂಡು ಬಂದನು. ಬಳಿಕ ದಾರಿ ಮಧ್ಯೆ ಆಕೆಗೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದನು. ಆಗ ಆಕೆ ಅಲ್ಲಿಂದ ತಪ್ಪಿಸಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಕ್ಷಣ ಕಾರ್ಯಪ್ರವೃತರಾದ ಪೊಲೀಸರು ಫೆ.26ರಂದು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.