ಕುಂದಾಪುರ: ಹೊಸಂಗಡಿಯ ಭಾಗಿಮನೆ ಬಳಿ ಟ್ರೆಕ್ಕಿಂಗ್ ಹೋಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ.1ರಂದು (ರವಿವಾರ) ನಡೆದಿದೆ.
ಮೃತಪಟ್ಟ ಮಹಿಳೆ ಕುಂದಾಪುರದಲ್ಲಿ ಮೆಡಿಕಲ್ ಶಾಪ್ ನಡೆಸುತ್ತಿದ್ದ ಶುಭಶ್ರೀ ಕಾರಂತ್ (53).
ಕುಂದಾಪುರದಿಂದ 8-10 ಜನರ ತಂಡ ಹೊಸಂಗಡಿಯ ಮೆಟ್ಕಲ್ ಗುಡ್ಡ ಕಡೆಗೆ ಟ್ರೆಕ್ಕಿಂಗ್ ಹೋಗಿದ್ದರು ಎಂದು ತಿಳಿದುಬಂದಿದೆ. ಮೃತದೇಹವನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಕಲೆಹಾಕಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

















