ಕಾರ್ಕಳ, ಮಾ.1: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟ ಘಟನೆ ಫೆ.28ರಂದು ರಾತ್ರಿ 8.45ರ ಸುಮಾರಿಗೆ ಕುಕ್ಕುಂದೂರು ಗ್ರಾಮದ ಮಹಾತ್ಮ ಗಾಂಧಿ ಶಾಲೆ ಎದುರುಗಡೆ ನಡೆದಿದೆ.
ಮೃತರನ್ನು ಎರ್ಲಪಾಡಿ ಗೋವಿಂದೂರಿನ ಬೈಕ್ ಸವಾರ ರಕ್ಷೀತ್(18) ಮತ್ತು ಅವರ ಸಂಬಂಧಿ ಸಹ ಸವಾರ ಶಿವಾನಂದ(19) ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರು, ಎದುರಿ ನಲ್ಲಿದ್ದ ವಾಹನವನ್ನು ಒವರ್ ಟೇಕ್ ಮಾಡುವ ಭರದಲ್ಲಿ ಎದುರಿನಲ್ಲಿ ಅಂದರೆ ಕಾರ್ಕಳದಿಂದ ಬೈಲೂರು ಕಡೆಗೆ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಬೈಕ್ ಸವಾರರು ಬೈಕ್ ಸಮೇತ ರಸ್ತೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ರಕ್ಷೀತ್ ಮತ್ತು ಶಿವಾನಂದ ಕಾರ್ಕಳ ಸರಕಾರಿ ಆಸ್ಪತ್ರಗೆ ಕೆರೆದೊಯ್ಯುತ್ತಿರುವ ದಾರಿ ಮದ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಕಾರು ಚಾಲಕ ಅಪಘಾತ ಉಂಟು ಮಾಡಿದ ನಂತರ ಗಾಯಾಳುವನ್ನು ಚಿಕಿತ್ಸೆಗೆ ಕರೆದೊಯ್ಯದೆ, ಪೊಲೀಸರಿಗೂ ಮಾಹಿತಿ ನೀಡದೇ ಸ್ಥಳದಿಂದ ಓಡಿ ಪರಾರಿಯಾಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

















