ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಚುನಾವಣಾ ಮತ ಎಣಿಕೆ ಗುರುವಾರ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಭೇಟಿ ನೀಡಿ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದರು.
ತಲಾ 5 ವಾರ್ಡ್ಗೆ ಒಬ್ಬರಂತೆ ಒಟ್ಟು 12 ಚುನಾವಣಾಧಿಕಾರಿಗಳು 12 ಕೊಠಡಿಗಳಲ್ಲಿ ಮತ ಎಣಿಕೆ ನಡೆಸಲಿದ್ದಾರೆ. ಆಯಾ ಚುನಾವಣಾಧಿಕಾರಿಗಳು ಪ್ರತಿಯೊಂದು ವಾರ್ಡ್ ಮತ ಎಣಿಕೆ ಪೂರ್ಣಗೊಂಡ ನಂತರ ಇನ್ನೊಂದು ವಾರ್ಡ್ನ ಮತ ಎಣಿಕೆ ಕೈಗೊಳ್ಳಲಿದ್ದಾರೆ. ಒಂದು ಸುತ್ತಿನಲ್ಲಿ 4 ಮತಗಟ್ಟೆಗಳ ಮತ ಎಣಿಕೆ ನಡೆಯಲಿದೆ. ಮತ ಎಣಿಕೆ ಕೇಂದ್ರ ಸುತ್ತಮುತ್ತ ತೀವ್ರ ಭದ್ರತೆ ಕೈಗೊಳ್ಳಲಾಗಿದೆ. ಬುಧವಾರ ಡಿಸಿಪಿ ಅರುಣಾಂಶುಗಿರಿ ಅವರ ನೇತೃತ್ವದಲ್ಲಿ ಭದ್ರತಾ ರಿಹರ್ಸಲ್ ನಡೆಯಿತು.












