ಮಂಗಳೂರು: ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಕುಡುಪು ಬಳಿ ಇರುವ ತೇಜಸ್ವಿನಿ ಹಾಸ್ಪಿಟಲ್ ಗ್ರೂಪ್ ಆಫ್ ಇನ್ಸ್ಟಿಟೂಷನ್ ಬಳಿ ಗುರುವಾರ ನಡೆದಿದೆ. ಮಣ್ಣಿನಡಿಯಿಂದ ಓರ್ವ ನನ್ನು ಹೊರ ತೆಗೆದು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮದ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸಾವನ್ನಪ್ಪಿರುವ ಕಾರ್ಮಿಕನನ್ನು ಶ್ಯಾಮ್ ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಗಂಭೀರ ಗಾಯಗೊಂಡಿದ್ದಾರೆ. ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












