ಉಡುಪಿ:ಶ್ರೀ ವೈ ಎಲ್ ಎನ್ ಜ್ಯೋತಿಷ್ಕ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಇಂಚರ ಸರ್ಜಿಕಲ್ ಕ್ಲಿನಿಕ್ ಉಡುಪಿ ಇವರ ವತಿಯಿಂದ ಮಾ.6 ರಂದು ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರಲ್ಲಿ ಕ್ಯಾನ್ಸರ್ ಎಂಬ ವಿಷಯದ ಬಗ್ಗೆ ಮಾಹಿತಿ ಶಿಬಿರವನ್ನು ಏರ್ಪಡಿಸಲಾಗಿತ್ತು.

ತಜ್ಞ ವೈದ್ಯರಾದ ಡಾ|ಸುದರ್ಶನ್ ರಾವ್ ಇವರು ಮಹಿಳೆಯಲ್ಲಿ ಬರುವ ಕ್ಯಾನ್ಸರ್ ಗಳಾದ ಸ್ತನ ಹಾಗೂ ಗರ್ಭಕೋಶ ಹಾಗೂ ಅಂಡಾಶಯದ ಕ್ಯಾನ್ಸರ್ ಗಳ ಬಗ್ಗೆ ಹಾಗೂ ಅದನ್ನು ತಡೆಗಟ್ಟುವ ಬಗ್ಗೆ ಹಾಗೂ ಶೀಘ್ರವಾಗಿ ಗುಣಪಡಿಸಿಕೊಳ್ಳುವ ಬಗ್ಗೆ ವಿವರವಾದ ಮಾಹಿತಿ ನೀಡಿದರು.ಇದೇ ಸಂದರ್ಭದಲ್ಲಿ ಟ್ರಸ್ಟ ನಿಂದ ವಾರ್ಷಿಕವಾಗಿ ನೀಡಲಾಗುತ್ತಿರುವ ದಿವಂಗತ ಡಾ.ವೈ ಚಂದ್ರಶೇಖರ್ ರಾವ್ ಸ್ಮಾರಕ ವಿದ್ಯಾರ್ಥಿ ವೇತನವನ್ನು 36 ವಿದ್ಯಾರ್ಥಿಗಳಿಗೆ ನೀಡಲಾಯಿತು. ಟ್ರಸ್ಟಿಗಳಾದ ಶ್ರೀ ವೈ ಭುವನೇಂದ್ರ ರಾವ್ ಅಧ್ಯಕ್ಷತೆ ವಹಿಸಿದ್ದರು. ಡಾ| ವಿದ್ಯಾರವರು ವಂದನಾರ್ಪಣೆ ಮಾಡಿದರು. ಶ್ರೀಮತಿ ನಿಕಿತ ಕಾರ್ಯಕ್ರಮ ನಿರೂಪಿಸಿದರು.



















