ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ಕುಂದಾಪುರದ ವಡೇರಹೋಬಳಿ ಗ್ರಾಮದ ರಾಯಪ್ಪನ ಮಠ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಶರತ್ ಕುಮಾರ್ ಶೆಟ್ಟಿ (51) ಎಂಬ ವ್ಯಕ್ತಿಯು ಮಾರ್ಚ್ 4 ರಂದು ಬೆಳಗ್ಗೆ 9.30 ರ ಸುಮಾರಿಗೆ ಬ್ಯಾಂಕ್ ಗೆ ಹೋಗುವುದಾಗಿ ಹೇಳಿ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ
ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338, ಕುಂದಾಪುರ
ಠಾಣೆಯ ಪಿ.ಐ ಮೊ.ನಂ: 9480805455 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.