ಕಾಪು: ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆ ಅವರ ನಿರ್ದೇಶನದಂತೆ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ವೈ. ಸುಕುಮಾರ್ ಅವರು ಹೆಜಮಾಡಿ, ಪಡುಬಿದ್ರಿ, ಉಚ್ಚಿಲ ಮತ್ತು ಮಲ್ಲಾರು ಗ್ರಾಮೀಣ ಕಾಂಗ್ರೆಸ್ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಬೋದ್ ಚಂದ್ರ ಹೆಜಮಾಡಿ ಅವರನ್ನು ನೇಮಕ ಮಾಡಲಾಗಿದೆ. ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾಗಿ ರಮೀಝ್ ಹುಸೈನ್ ಅವರನ್ನು ನೇಮಕ ಮಾಡಲಾಗಿದೆ. ಉಚ್ಚಿಲಾ ಬಡಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾಗಿ ಸುಕುಮಾರ್ ಬಂಗೇರ ಅವರನ್ನು ನೇಮಕ ಮಾಡಲಾಗಿದೆ. ಮಲ್ಲಾರು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾಗಿ ನಸೀರ್ (51 ಕಾಪು) ಅವರನ್ನು ನೇಮಕ ಮಾಡಲಾಗಿದೆ.
ನೂತನವಾಗಿ ನೇಮಕಗೊಂಡಿರುವ ಅಧ್ಯಕ್ಷರುಗಳ ನೇತೃತ್ವದಲ್ಲಿ ಪಕ್ಷದ ಸಂಘಟನೆ ಕಾರ್ಯಗಳು ಇನ್ನಷ್ಟು ಚುರುಕುಗೊಂಡು ಆ ಭಾಗದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಲಿ ಹಾಗೂ ಮುಂಬರುವ ಎಲ್ಲಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಲಿ. ಜೊತೆಗೆ ಅವರ ರಾಜಕೀಯ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಲಾಗಿದೆ.
















