ಉಡುಪಿ:ವಿಶ್ವ ಗ್ರಾಹಕರ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಬಳಕೆದಾರರ ವೇದಿಕೆ (ರಿ) ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮವು ಮಾರ್ಚ್ 14 ರಂದು ಬೆಳಗ್ಗೆ 10 ಗಂಟೆಗೆ ನಗರದ ಕುಂಜಿಬೆಟ್ಟು ವೈಕುಂಠ ಬಾಳಿಗ ಕಾನೂನು ಕಾಲೇಜಿನಲ್ಲಿ ನಡೆಯಲಿದೆ.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕುಂಜಿಬೆಟ್ಟು ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದ
ಪ್ರಾಂಶುಪಾಲೆ ಸುರೇಖಾ ಕೆ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಅಂಬಲಪಾಡಿ ಶ್ರೀ ಜನಾರ್ಧನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬಿ ವಿಜಯ ಬಲ್ಲಾಳ್, ಜಿಲ್ಲಾ
ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಬಿ.ವೈ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಸುನೀಲ ತಿ ಮಾಸರೆಡ್ಡಿ, ಸದಸ್ಯೆ ಸುಜಾತ ಬಸವರಾಜ ಕೋರಳ್ಳಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.