ಉಡುಪಿ: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ(ಭಾರತೀಯ ಮತ್ತು ವಿದೇಶೀಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ರ ನಿಯಮ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಫೆಬ್ರವರಿ 16 ರಂದು ಬೆಳಗ್ಗೆ 6 ಗಂಟೆಯಿಂದ ಫೆ. 17 ರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್ಗಳ ಮದ್ಯ ಮಾರಾಟವನ್ನು ನಿಷೇಧಿಸಿ, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮೇಲೆ ತಿಳಿಸಲಾದ ದಿನಾಂಕದಂದು ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.
















