ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೆ: ಬದಲಿ ಮಾರ್ಗ

ಉಡುಪಿ: ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ರಾ.ಹೆ169(ಎ) ರ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಮಾರ್ಚ್ 16 ರಂದು ಸಂಜೆ 4.00 ಗಂಟೆಯಿಂದ ರಾತ್ರಿ 10.00 ಗಂಟೆವರೆಗೆ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.

ಬದಲಿ ಮಾರ್ಗದ ವಿವರಗಳು:ರಾಷ್ಟ್ರೀಯ ಹೆದ್ದಾರಿ 169(ಎ) ರಲ್ಲಿ ಉಡುಪಿಯಿಂದ ಹೆಬ್ರಿ-ಆಗುಂಬೆ ಕಡೆಗೆ ಹೋಗುವ ವಾಹನಗಳು ಹಿರಿಯಡ್ಕ ಜಂಕ್ಷನ್ನಲ್ಲಿ ಮಾರ್ಗ ಬದಲಾಯಿಸಿ-ಕೋಟ್ನಾಕಟ್ಟೆ-ಹರಿಖಂಡಿಗೆ-ಬೈರಂಪಳ್ಳಿ-ಪೆರ್ಡೂರು ಮೇಲ್ಪೆಟೆ ಮಾರ್ಗವಾಗಿ ಅಥವಾ ಹಿರಿಯಡ್ಕ ಬಜೆ, ಕುಕ್ಕೆಹಳ್ಳಿ, ಪೇತ್ರಿ ಮಾರ್ಗವಾಗಿ ಹೆಬ್ರಿ, ಆಗುಂಬೆಗೆ ಸಂಚರಿಸುವುದು.ರಾಷ್ಟ್ರೀಯ ಹೆದ್ದಾರಿ 169(ಎ) ರಲ್ಲಿ ಆಗುಂಬೆ-ಹೆಬ್ರಿಯಿಂದ-ಉಡುಪಿ ಕಡೆಗೆ ಬರುವ ವಾಹನಗಳು ಪೆರ್ಡೂರು ಮೇಲ್ಪೆಟೆ-ಬೈರಂಪಳ್ಳಿ-ಹರಿಖಂಡಿಗೆ-ಕೋಟ್ನಾಕಟ್ಟೆ-ಹಿರಿಯಡ್ಕ ಜಂಕ್ಷನ್ ಮಾರ್ಗವಾಗಿ ಉಡುಪಿಗೆ ಸಂಚರಿಸುವುದು. ರಾಷ್ಟ್ರೀಯ ಹೆದ್ದಾರಿ 169(ಎ) ರಲ್ಲಿ ಹೆಬ್ರಿಯಿಂದ ಪೆರ್ಡೂರು ಮಾರ್ಗವಾಗಿ ಪೇತ್ರಿ-ಬ್ರಹ್ಮಾವರ ಕಡೆ ಸಂಚರಿಸುವವಾಹನಗಳು ಪೆರ್ಡೂರು ಮೇಲ್ಪೆಟೆಯ ಆರ್‌ಎಸ್‌ಎಸ್ ಬ್ಯಾಂಕ್ ಬಳಿ ಇರುವ ಅಲಂಗಾರು ರಸ್ತೆ ಮಾರ್ಗವಾಗಿ ಕರ್ಜೆ-ಪೇತ್ರಿ-ಬ್ರಹ್ಮಾವರ ಕಡೆಗೆ ಸಂಚರಿಸುವುದು.ಮಾರ್ಚ್16 ರಂದು ಸಂಜೆ 4.00 ಗಂಟೆಯಿAದ ರಾತ್ರಿ 10.00 ಗಂಟೆವರೆಗೆ ಪೆರ್ಡೂರು ಕೆಳಪೇಟೆಯಿಂದ-ಮೇಲ್ಪೆಟೆಯ ಬಸ್ ನಿಲ್ದಾಣದವರೆಗೆ ವಾಹನ ಸಂಚಾರ ಮುಕ್ತಗೊಳಿಸಲಾಗಿದೆ ಎಂದು ಜಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.