ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ವಿದ್ಯಾರ್ಥಿಗಳಾದ ಗೌರವ್ ಶೆಟ್ಟಿ ಮತ್ತು ಕಾರ್ತಿಕ್ ಎ ಆಚಾರ್ಯ ಇವರು ದಿನಾಂಕ 27 ಮತ್ತು 28 ಫೆಬ್ರವರಿ 2026 ರಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ “ಯುಕ್ತಿ 2026”, ರಾಷ್ಟ್ರೀಯ ಮಟ್ಟದ ಲೈನ್ ಫಾಲೋವರ್ ಸ್ಪರ್ಧೆಯಲ್ಲಿ ಇವರು ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಯು ವಿದ್ಯಾರ್ಥಿಗಳಲ್ಲಿನ ನಾವೀನ್ಯತೆ, ತಾಂತ್ರಿಕ ಶ್ರೇಷ್ಠತೆ ಮತ್ತು ಪ್ರಾಯೋಗಿಕ ಕಲಿಕೆಯನ್ನು ಬೆಳೆಸುವಲ್ಲಿ ಸಂಸ್ಥೆಯ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಂಸ್ಥೆಯ ಪ್ರಾಂಶುಪಾಲರು ಹರ್ಷವ್ಯಕ್ತಪಡಿಸಿದ್ದಾರೆ.

















