ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ತಾ.16.4.2026ರಿಂದ ತಾ. 20.4.2026ರಿಂದ ನಡೆಯಲಿರುವ ಬ್ರಹ್ಮಕಲಶೋತ್ಸವ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್‌ರವರಿಗೆ ನೀಡಿ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮಾಧವ ಪೂಜಾರಿ ಬನ್ನಂಜೆ, ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕರಾದ ರಮೇಶ್ ಕಾಂಚನ್, ದೇವಸ್ಥಾನದ ಅರ್ಚಕರಾದ ಮಧುಸುಧನ್ ಉಪಾಧ್ಯಾಯ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸುದೇಶ್ ಶೇಟ್, ಪ್ರಭಾಕರ್ ಶೆಟ್ಟಿ, ರಾಜೇಶ್ ಬನ್ನಂಜೆ, ಶೇಖರ್ ಶೆಟ್ಟಿ, ವಿದ್ಯಾಲತಾ ಯು ಶೆಟ್ಟಿ, ಶಮಿತಾ ಎಸ್ ಭಂಡಾರಿ, ಮೀನಾಕ್ಷಿ ಮಾಧವ ಬನ್ನಂಜೆ ಅವರು ಉಪಸ್ಥಿತರಿದ್ದರು.
















