ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ ಹಾಗೂ ತಾಲೂಕು ಪಂಚಾಯತ್ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ-2026 ಏಪ್ರಿಲ್ 2 ರಂದು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ಇಲ್ಲಿ ನಡೆಯಲಿದೆ.
ಉದ್ಯೋಗ ಮೇಳದಲ್ಲಿ ವಿವಿಧ ಕಂಪನಿಗಳು ಭಾಗವಹಿಸಲಿದ್ದು, ಅಭ್ಯರ್ಥಿಗಳು ಸಂಬAಧಿಸಿದ ವಿದ್ಯಾರ್ಹತೆ, ಅಗತ್ಯ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಅಭ್ಯರ್ಥಿಗಳು udupi.nic.in ವೆಬ್ಸೈಟ್ಗೆ ಭೇಟಿ ನೀಡಿ, ಉದ್ಯೋಗ ಮೇಳ-2026 ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅವಿನಾಶ್, ಜಿಲ್ಲಾ ವ್ಯವಸ್ಥಾಪಕರು, ಮೊ.ನಂ: 9844234080 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
















