ಮಣಿಪಾಲ: ರಸ್ತೆ ಕಾಂಕ್ರೀಟೀಕರಣ ಕಾಮಗಾರಿ; ವಾಹನ ಸಂಚಾರ ನಿರ್ಬಂಧ

ಉಡುಪಿ, ಮಾ.27: ಉಡುಪಿ ನಗರಸಭಾ ವ್ಯಾಪ್ತಿಯ ಮಣಿಪಾಲ ವಾರ್ಡಿನ ಇಂಡಸ್ಟ್ರಿಯಲ್ ಏರಿಯಾ ಕಲ್ಯಾಣಿ ಆರ್.ಎಂ.ಸಿಯಿಂದ ಕೆ.ಇ.ಬಿ ಕಚೇರಿವರೆಗಿನ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಯನ್ನು ಪ್ರಾರಂಭಿಸಲಾಗಿದ್ದು, ಕಾಮಗಾರಿ ನಡೆಯುವ ಸಂದರ್ಭದಲ್ಲಿ ಹಾಗೂ ಕಾಮಗಾರಿ ಪೂರ್ಣ ಗೊಳ್ಳುವರೆಗೆ ಸದರಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.