ಉಡುಪಿ: ಸಮಾಲೋಚಕ ಹುದ್ದೆ- ಅರ್ಜಿ ಆಹ್ವಾನ

ಉಡುಪಿ: ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಯೋಜನಾ ಸಂಯೋಜಕ-1 (ಯಾವುದೇ ಸ್ನಾತಕ್ಕೋತ್ತರ ಪದವಿ) ಹಾಗೂ ಆಪ್ತ ಸಮಾಲೋಚಕ-3 (ಎಂ ಎಸ್ ಡಬ್ಲ್ಯೂ) ಹುದ್ದೆಗಳ ನೇಮಕಾತಿಗಾಗಿ ಅರ್ಹ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಎಪ್ರಿಲ್ 13 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಬನ್ನಂಜೆ ದೂ.ಸಂ;0820-2526394 ಇಲ್ಲಿ ಖುದ್ದಾಗಿ ಅಥವಾ ಇ-ಮೇಲ್ [email protected] ಅನ್ನು ಸಂಪರ್ಕಿಸಬಹುದು ಎಂದು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಪ್ರಕಟಣೆ ತಿಳಿಸಿದೆ.