ಉಡುಪಿ: ಸಿ.ಎಸ್.ಐ ಲೊಂಬಾರ್ಡ್ ಮೆಮೋರಿಯಲ್ (ಮಿಷನ್) ಆಸ್ಪತ್ರೆಯು ಕಟಪಾಡಿಯಲ್ಲಿ ಆರಂಭಿಸಿರುವ ನೂತನ ಆರೋಗ್ಯ ಕೇಂದ್ರದ ಉದ್ಘಾಟನಾ ಸಮಾರಂಭವು ಎ.4ರ ಶನಿವಾರದಂದು ಬೆಳಿಗ್ಗೆ 10.30ಕ್ಕೆ ಕಟಪಾಡಿ ಬಸ್ ನಿಲ್ದಾಣದಲ್ಲಿ ನಡೆಯಲಿದೆ ಎಂದು ಮಿಷನ್ ಆಸ್ಪತ್ರೆಯ ನಿರ್ದೇಶಕ ಡಾ. ಸುಶಿಲ್ ಜತನ್ನ ಹೇಳಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹೊಸ ಆರೋಗ್ಯ ಕೇಂದ್ರವು ಕಟಪಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಸುಲಭವಾಗಿ ಲಭ್ಯವಾಗುವ, ಕೈಗೆಟುಕುವ ಮತ್ತು ಮಾನವೀಯ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾಗಿದೆ. ಈ ಸೇವೆಯನ್ನು ಸಿ.ಎಸ್.ಐ-ಕರ್ನಾಟಕ ದಕ್ಷಿಣ ಧರ್ಮಪ್ರಾಂತ್ಯದ (KSD) ಬಿಷಪ್ ಹೇಮಚಂದ್ರ ಕುಮಾರ್ ಲೋಕಾರ್ಪಣೆ ಮಾಡಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಆಸ್ಪತ್ರೆಯ ಪಿಆರ್ ಒ ರೋಹಿ ರತ್ನಾಕರ್, ವೈದ್ಯರಾದ ಲೀನಾ ಪ್ರಭಾವತಿ , ಕಾವ್ಯಶ್ರೀ ಶೆಟ್ಟಿ ಉಪಸ್ಥಿತರಿದ್ದರು.

















