ಉಡುಪಿ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಅಧ್ಯಯನ ಮಾಡಲು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಲು, ಕಳೆದ ಸಾಲಿನ 5 ನೇ ತರಗತಿಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
5 ನೇ ತರಗತಿಯಲ್ಲಿ ಶೇ. 60 ರಷ್ಟು ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಪೋಷಕರ ವರಮಾನ ವಾರ್ಷಿಕ 2 ಲಕ್ಷ ರೂ. ಮೀರಿರದ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

















